ಹಾಡಹಗಲೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ..!

ಹಾಡಹಗಲೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ..!

ಮಹಾರಾಷ್ಟ್ರ : ಹಾಡಹಗಲೇ 19 ವರ್ಷದ ಪಾಗಲ್​​ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಪ್ರವೀಣ್ ಕೌನ್​ಪುರೆ ಕೊಲೆ ಮಾಡಿರುವ ಆರೋಪಿ. ಹಾಡಹಗಲೇ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್​​ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ದರಿಯಾಪುರ ತಾಲೂಕಿನ ಲೇಹಾಗಾಂವ್​​ ಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ


0 Comments: