ನಾಳೆ ವರೆಗೆ ಲಾಕ್‌ಡೌನ್‌ ವಿಸ್ತರಣೆ...!

ನಾಳೆ ವರೆಗೆ ಲಾಕ್‌ಡೌನ್‌ ವಿಸ್ತರಣೆ...!

ಬೆಂಗಳೂರು: 'ಏ.21 ರ ಮಧ್ಯರಾತ್ರಿಯವರೆಗೆ ಲಾಕ್‌ಡೌನ್‌ ನಿರ್ಬಂಧಗಳಲ್ಲಿ ಸಡಿಲಿಕೆ ಇರುವುದಿಲ್ಲ' ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ನೀಡಿದೆ.

ಸರ್ಕಾರದಿಂದ ಭಾನುವಾರ ರಾತ್ರಿ ಎಲ್ಲ ಇಲಾಖೆಗೆಗಳ ಮುಖ್ಯಸ್ಥರು, ಡಿಸಿಗಳಿಗೆ ಸೂಚನೆ ನೀಡಲಾಗಿದ್ದು, ಏ.14ರಂದು ಕೇಂದ್ರ ಗೃಹ ಇಲಾಖೆ ಸೂಚಿಸಿರುವ ಲಾಕ್‌ಡೌನ್‌ ನಿಯಮಾವಳಿಗಳನ್ನು ಏ. 21 ಮಧ್ಯರಾತ್ರಿಯ ವರೆಗೆ ವಿಸ್ತರಿಸುವಂತೆ ಸೂಚಿಸಲಾಗಿದೆ. ಏ. 20ರ ನಂತರ ಪರಿಸ್ಥಿತಿಗೆ ಅನುಗುಣವಾಗಿ ಲಾಕ್‌ಡೌನ್‌ ವಿಸ್ತರಿಸುವ, ಸಡಿಲಗೊಳಿಸುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಒಂದು ದಿನದ ಮಟ್ಟಿಗೆ ಲಾಕ್‌ಡೌನ್‌ ವಿಸ್ತರಿಸಿದೆ.

ಈ ಮಧ್ಯೆ, ಆರ್ಥಿಕ ಚಟುವಟಿಕೆಗಳಿಗೆ ಚಾಲನೆ ನೀಡಲು ಏ.21 ರ ಮಧ್ಯರಾತ್ರಿಯಿಂದ ಕೋವಿಡ್‌-19 ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಲು ಸೋಮವಾರ ಸಚಿವ ಸಂಪುಟ ಸಭೆ ನಡೆಯಲಿದೆ.

ಅಲ್ಲಿ ಮಹತ್ವದ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕೋವಿಡ್‌-19 ಹಾಟ್‌ಸ್ಪಾಟ್‌/ ಕ್ಲಸ್ಟರ್‌/ ಕಂಟೇನ್ಮೆಂಟ್‌ ಝೋನ್‌ ವ್ಯಾಪ್ತಿಗೆ ಒಳಪಡದ ಪ್ರದೇಶಗಳು ಮತ್ತು ಕೊರೊನಾ ಬಾಧಿತವಲ್ಲದ ಜಿಲ್ಲೆಗಳಲ್ಲಿ ಏ.21 ರ ಬಳಿಕ ಲಾಕ್‌ಡೌನ್‌ನ ಕೆಲವು ನಿರ್ಬಂಧಗಳನ್ನು ಸಡಿಲಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ಹೇಳಿವೆ.

ಆದರೆ, ಐಟಿ-ಬಿಟಿ ಸಿಬ್ಬಂದಿಗೆ ಕಚೇರಿಗೆ ಹೋಗಿ ಕೆಲಸ ಮಾಡುವುದು ಮತ್ತು ದ್ವಿಚಕ್ರ ವಾಹನಗಳ ಓಡಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಧಾರ ಗೊಂದಲಕ್ಕೆ ಎಡೆಮಾಡಿ, ಬಳಿಕ ನಿರ್ಣಯವನ್ನು ಹಿಂದಕ್ಕೆ ಪಡೆಯಲಾಯಿತು. ಈ ಕಹಿ ಅನುಭವದ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.

ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೆ ಚಾಲನೆ, ವಿವಿಧ ಕ್ಷೇತ್ರಗಳಲ್ಲಿ ಕಾರ್ಮಿಕರ ಕೊರತೆ ನೀಗಿಸಲು ಅವರ ಸಾಗಣೆಗೆ ವ್ಯವಸ್ಥೆ ಮಾಡುವುದು, ನಿರ್ಬಂಧಗಳೊಂದಿಗೆ ದೊಡ್ಡ ಉದ್ಯಮಗಳ ಮರುಚಾಲನೆ, ಉದ್ಯಮ ಸಂಕೀರ್ಣಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ಈ ಮೂಲಕ ಆರ್ಥಿಕ ಚಟುವಟಿಕೆಗೆ ಚಾಲನೆ ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದರ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಜಿಲ್ಲೆಗಳಲ್ಲಿ ನರೇಗಾ ಚಟುವಟಿಗೆ ಚಾಲನೆ ನೀಡಿ ಈ ಮೂಲಕ ಕಾರ್ಮಿ ಕರಿಗೆ ಉದ್ಯೋಗ ನೀಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಈ ಬಗ್ಗೆ ಜಿಲ್ಲಾಧಿ ಕಾರಿಗಳಿಗೆ ಕೆಲವುಗಳನ್ನು ಸೂಚನೆ ನೀಡುವ ಸಾಧ್ಯತೆ ಇದೆ.

ನಿಯಮಾವಳಿ ಉಲ್ಲಂಘಿಸಿ ನಿರ್ಮಿ ಸಿದ ಕಟ್ಟಡ ಸಕ್ರಮಗೊಳಿಸುವ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದು ಕೊಳ್ಳಲಾಗುವುದು. ಇತ್ತೀಚೆಗೆ ಈ ಸಂಬಂಧ ಸಭೆಯನ್ನು ನಡೆಸಲಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣ ಹಿಂದಕ್ಕೆ ಪಡೆಯಲು ಆ ಸಭೆಯಲ್ಲಿ ತೀರ್ಮಾ ನಿಸಲಾಗಿತ್ತು. ಅದಕ್ಕೆ ನಾಳೆಯ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಗಲಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

0 Comments: