ಹಾವೇರಿ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಇಲ್ಲಿನ ಇಬ್ಬರು ಸೋಂಕಿತರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರಿಗೆ ಬಂದು ಹೋಗಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ಈ ಹಿನ್ನಲೆಯಲ್ಲಿ ಆಡೂರಿನ 21 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ.
ವಿಜಯಪುರ ಜಿಲ್ಲೆಯ ರೋಗಿ ನಂಬರ್ 306 ಮತ್ತು 308 ಟ್ರಾವೆಲ್ ಹಿಸ್ಟರಿ ಪರಿಶೀಲಿಸಲಾಗಿದ್ದು, ಇವರು ಆಡೂರಿಗೆ ಭೇಟಿ ನೀಡಿದ್ದಾರೆ. ಏಪ್ರಿಲ್ 5 ರಂದು ಆಡೂರಿನ ತಮ್ಮ ಸಂಬಂಧಿಕರ ಮನೆಗೆ ಬಂದು ಊಟ ಮಾಡಿ ಹೋಗಿದ್ದಾರೆ. ಸೋಂಕಿತರ ಟ್ರಾವೆಲ್ ಹಿಸ್ಟರಿ ಆಧಾರದ ಮೇಲೆ 21 ಜನರನ್ನು ಜಿಲ್ಲಾಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಗಿದೆ.
ಈ 21 ಜನರಲ್ಲಿ ಸಧ್ಯಕ್ಕೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ಆದರೂ ಅವರ ರಕ್ತ ಮತ್ತು ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್‍ಗೆ ಕಳುಹಿಸಲಾಗಿದೆ.
0 Comments: